ಬಗರ್ ಹುಕುಂ ಜಮೀನು ಸಕ್ರಮಕ್ಕೆ ಫಾರಂ 57ರಲ್ಲಿ ಸಲ್ಲಿಸಿದ ಅರ್ಜಿಗಳಲ್ಲಿ ದುರುಪಯೋಗ ಆಗಿರುವ ಸಾಧ್ಯತೆಗಳಿದ್ದು, ಕೆಲವರು 5 ರಿಂದ 10 ಅರ್ಜಿ ಹಾಕಿರುವ ಮಾಹಿತಿ ಇದೆ, ಇದರಿಂದ ನಿಜವಾದ ಸಾಗುವಳಿದಾರರಿಗೆ ಅನ್ಯಾಯವಾಗದ ಹಾಗೆ ನೋಡಿಕೊಳ್ಳಬೇಕು ಎಂದು ಕಂದಾಯ ಸಚಿವರು ಸೂಚಿಸಿದ್ದಾರೆ.
15 ವರ್ಷದಿಂದ ಉಳುಮೆ ಮಾಡಿಕೊಂಡು ಬಂದಿರುವ ಭೂಮಿಯನ್ನು app ಮೂಲಕ ಪತ್ತೆ ಮಾಡಿ ಅರ್ಹರಿಗೆ ಸಾಗುವಳಿ ಚೀಟಿ ನೀಡಲಾಗುವುದು. ಆದಷ್ಟು ಬೇಗ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು. ತಿಳಿಸಿದ್ದಾರೆ.
