ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಹಸ ಮಾಡುತ್ತಿದೆ. ಆಕ್ರಮ ತಡೆಗಟ್ಟಲು ದಿನಕ್ಕೊಂದು ನಿಯಮಾವಳಿ ರೂಪಿಸುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ತೆಗೆದುಕೊಂಡ ತೀರ್ಮಾನಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ 20 ದಿನಗಳ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಯಲ್ಲಿ, ವಿಧ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು.
ಇದೀಗ ಮತ್ತೊಂದು ಆದೇಶ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪರೀಕ್ಷೆ ಬರೆಯುವ ವಿಧ್ಯಾರ್ಥಿನಿಯರಿಗೆ ತಾಳಿ ಹಾಕಿಕೊಂಡು ಬರಲು ಅನುಮತಿ ನೀಡಿದ್ದು , ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಿಷೇಧ ಹೇರಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಆದೇಶಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
