ಕಾಂಗ್ರೆಸ್ ನಡೆಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವ್ಯವಹಾರಗಳ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಮತ್ತು ಯಂಗ್ ಇಂಡಿಯನ್ (ವೈಐ) ಗೆ ಸೇರಿದ ₹ 751 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ.
ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿ ಎಜೆಎಲ್‌ಗೆ ಸೇರಿದ ₹ 661 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದ್ದರೆ, ಯಂಗ ಇಂಡಿಯಾ ದ ಅಪರಾಧದ ಆದಾಯವನ್ನು ಈಕ್ವಿಟಿ ಷೇರುಗಳ ರೂಪದಲ್ಲಿ ಜಪ್ತಿ ಮಾಡಲಾಗಿದೆ. ಇ ಡಿ ನ್ಯಾಷನಲ್ ಹೆರಾಲ್ಡ್ ತನಿಖೆಯಲ್ಲಿ ₹ 751 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಸಂಸ್ಥೆ ತಿಳಿಸಿದೆ. ನ್ಯಾಷನಲ್ ಹೆರಾಲ್ಡ್ ತನಿಖೆಯಲ್ಲಿ ₹ 751 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದಂತಾಗಿದೆ.
ದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನೀಡಿದ ಪ್ರಕ್ರಿಯೆಯ ಆಧಾರದ ಮೇಲೆ ನ್ಯಾಷನಲ್ ಹೆರಾಲ್ಡ್ ವಿರುದ್ಧ ಜಾರಿ ನಿರ್ದೇಶನಾಲಯ ಹಣ-ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತ್ತು.
ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾರಿ ನಿರ್ದೇಶನಾಲಯ ಕಾಂಗ್ರೇಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು, ಕಾಂಗ್ರೇಸ್ ಇಕ್ಕಟ್ಟಿಗೆ ಸಿಲುಕಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಯಂಗ್ ಇಂಡಿಯನ್ ನಿರ್ದೇಶಕರಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ಸ್ಯಾಮ್ ಪಿತ್ರೋಡಾ ಅಸೋಸಿಯೇಟ್ ಜರ್ನಲ್ ನ ನಿರ್ದೇಶಕರಾಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ಸಮರಕ್ಕೆ ಕಾರಣವಾಗಿತ್ತು.
