ಜಾತಿ ಗಣತಿ ವರದಿ ಬಗ್ಗೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗರ ವಿರೋದವಿದೆ. ಅದರ ಬಗ್ಗೆ ಸ್ಪಷ್ಟವಾಗಿ ಏನನ್ನು ಹೇಳೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೀದರ ಪ್ರವಾಸದಲ್ಲಿರುವ ಬಿ ಎಸ್ ಯಡಿಯೂರಪ್ಪ, ಜಾತಿಗಣತಿ ಬಗ್ಗೆ ಜನರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಹೇಳುವದಾಗಿ ಹೇಳಿದ್ದಾರೆ. ಜಾತಿಗಣತಿ ವಿಷಯವಾಗಿ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳತ್ತೆ ಅನ್ನೋದನ್ನ ಕಾದು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.
