ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡಿದ್ದ ಪ್ರಯಾಣಿಕನನ್ನು ಕೊಂಕಣ ರೈಲ್ವೆ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಈ ಘಟನೆ ಭಟ್ಕಳ ರೈಲು ನಿಲ್ದಾಣದಲ್ಲಿ ನಡೆದಿದ್ದು, ಸಿಕ್ಕಿಹಾಕಿಕೊಂಡಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ರೈಲು ನಿಲ್ದಾಣದ ಸಿ ಸಿ ಕ್ಯಾಮರಾದಲ್ಲಿ ಈ ಘಟನೆ ಸೆರೆಯಾಗಿದೆ.
