ನವಲಗುಂದದ ಕರ್ಲವಾಡ ಗ್ರಾಮದ ಬಳಿ ಮರಳಿನ ಟಿಪ್ಪರ ಮತ್ತು ಟೆಂಪೋ ಟ್ರಾವಲರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ನವಲಗುಂದ ಕಡೆಗೆ ಹೊರಟಿದ್ದ ಮರಳಿನ ಟಿಪ್ಪರ ಚಾಲಕನ ನಿರ್ಲಕ್ಷ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಟೆಂಪೋ ಟ್ರಾವಲರ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಗೊತ್ತಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
