ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಅಪಾರ ಸಂಖ್ಯೆಯ ಜನ ಅಹವಾಲು ಹೊತ್ತು ಬಂದಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಜನ ಮುಖ್ಯಮಂತ್ರಿಗಳ ನಿವಾಸಕ್ಕೆ ಬಂದಿದ್ದು, ಜನತಾ ದರ್ಶನದಲ್ಲಿ ಭಾಗವಹಿಸಿದ್ದಾರೆ.
ಇತ್ತೀಚಿಗೆ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಪೊಲೀಸ್ ಹಾಗೂ ಪಾಲಿಕೆ ಸಿಬ್ಬಂದಿಯಿಂದ ಕಿರುಕುಳ ನೀಡಲಾಗುತ್ತಿದೆ, ಅದನ್ನು ತಪ್ಪಿಸಿ ಎಂದು ಮುಖ್ಯಮಂತ್ರಿ ಎದುರು ಅಳಲು ತೋಡಿಕೊಂಡಿದ್ದಾರೆ. ತಕ್ಷಣ ಅಧಿಕಾರಿಗಳಿಗೆ ಸಂಪರ್ಕಿಸಿ, ಬೀದಿ ಬದಿ ವ್ಯಾಪಾರಿಗಳು ಮತ್ತು ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ತೊಂದರೆ ಕೊಡದಂತೆ ಮುಖ್ಯಮಂತ್ರಿಗಳು ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಂಗವಿಕಲರು, ವಯೋ ವೃದ್ಧರು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದು, ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
