ಡಿಸೆಂಬರ 4 ರಿಂದ ಹತ್ತು ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಯಲಿ, ಕಾಲಹರಣ ಬೇಡ ಎಂದು ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದ್ದಾರೆ.
ಕಿತ್ತೂರ ಕರ್ನಾಟಕದಲ್ಲಿ ಅನೇಕ ಸಮಸ್ಯೆಗಳಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಕೇಳುವ ಪ್ರಶ್ನೆಗಳಿಗೆ ಆಧ್ಯತೆ ನೀಡಲಾಗುವದು ಎಂದರು. ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಹಜವಾಗಿ ಪ್ರತಿಭಟನೆಗಳು ನಡೆಯುತ್ತವೆ. ಪ್ರತಿಭಟನೆ ನಡೆಸುವ ಸಂಘಟನೆಗಳ ಮುಖಂಡರ ಜೊತೆ ಮುಂಚಿತವಾಗಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದರು.
ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕೆಂದ ಅವರು, ಈ ಸಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕಕ್ಕೆ ಅನುಕೂಲ ಕಲ್ಪಿಸುವ ಯಾವದೇ ಬಿಲ್ ಪಾಸ್ ಆಗೋದಿಲ್ಲ, ಬದಲಾಗಿ ಬೇರೆ ಬೇರೆ ಬಿಲ್ ಪ್ರಸ್ತಾವನೆ ಬರುವ ಸಾಧ್ಯತೆ ಇದೆ ಎಂದರು.
