ಬಡತನ, ಕಿರುಕುಳ, ಬಡ್ಡಿ ದಂಧೆಗೆ ಸಂಬಂಧಿಸಿದಂತೆ ತುಮಕೂರನಲ್ಲಿ ನಿನ್ನೇ ನಡೆದಿದ್ದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಬಡ್ಡಿ ದಂಧೆಕೋರರನ್ನು ಹೆಡೆಮುರಿಗೆ ಕಟ್ಟಲಾಗುವದು ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.
ಗರೀಬಸಾಬ ಕುಟುಂಬದ ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರದ ಆರೋಪ ಕೇಳಿಬರುತ್ತಿದ್ದು, ಮೀಟರ ಬಡ್ಡಿ ಕುಳಗಳನ್ನು ಮಟ್ಟ ಹಾಕಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
