Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಚಾಮುಂಡೇಶ್ವರಿ ದೇವಿಗೆ 5 ವರ್ಷದ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಸಲಕ್ಕೆ ಪಾವತಿ

ರಾಜ್ಯ ಕಾಂಗ್ರೇಸ್ ಸರ್ಕಾರದ ಪ್ರಮುಖ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚಾಮುಂಡೇಶ್ವರಿ ದೇವಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಸಲಕ್ಕೆ ಜಮಾ ಮಾಡಲಾಗಿದೆ.

ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಐದು ವರ್ಷಗಳ ಕಂತನ್ನು ಲಕ್ಷ್ಮಿ ಹೆಬ್ಬಾಳಕರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ವೈಯಕ್ತಿಕವಾಗಿ ಸಲ್ಲಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ. ಮೊದಲ ಕಂತನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ರವರು ಸಲ್ಲಿಸಿದ್ದರು. ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯನವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೇಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ ಎಂದು ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!