ಉತ್ತರಕಾಶಿಯ ಸುರಂಗದಲ್ಲಿ ಕಳೆದ 17 ದಿನಗಳಿಂದ ಸಿಕ್ಕಿಹಾಕಿಕೊಂಡಿದ್ದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಸಾವು ಗೆದ್ದು ಬಂದ ಧೀರ ಕಾರ್ಮಿಕರನ್ನು ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಗ ಧಮಿ, ಅವರನ್ನು ಮಾಲೆ ಹಾಕುವ ಮೂಲಕ ಸ್ವಾಗತಿಸಿದರು.
ಸಿಕ್ಕಿಹಾಕಿಕೊಂಡಿದ್ದ ಕಾರ್ಮಿಕರು ಹೊರಬರುತ್ತಿದ್ದಂತೆ ಘೋಷಣೆಗಳು ಮೊಳಗಿದವು. ಕಾರ್ಮಿಕರ ಕುಟುಂಬದವರು ಸಂತಸಗೊಂಡರು. ಕೆಲವರು ಸಿಹಿ ಹಂಚಿ ಸಂಭ್ರಮಿಸಿದರೆ, ಕೆಲವರು ಪ್ರಾರ್ಥನೆ ಸಲ್ಲಿಸಿದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗಳಿಗೆ ಅಭಿನಂದಿಸಲಾಯಿತು.
