ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4 ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದ್ದಾರೆ. ಕೆಲ ಶಾಸಕರು ಬೆಳಗಾವಿ ಅಧಿವೇಶನ ಕೇವಲ ಪ್ರತಿಭಟನೆಗೆ ಸೀಮಿತ ಎಂದು ಸದನಕ್ಕೆ ಗೈರು ಆಗ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಸೆಂಬರ್ 5 ಹಾಗೂ 6 ರಂದು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಸಮಯ ನೀಡಲಾಗುವದು ಎಂದು ತಿಳಿಸಿದರು. ಚಳಿಗಾಲದ ಅಧಿವೇಶನ ಕನಿಷ್ಟ 25 ದಿನ ನಡೆಯಬೇಕು. ಅಧಿವೇಶನದ ಅವಧಿ ವಿಸ್ತರಣೆ ಮಾಡೋದಕ್ಕೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.
ಸದನದಲ್ಲಿ ಗಂಭೀರ ಚರ್ಚೆ ನಡೆದಲ್ಲಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬಹುದು ಎಂದು ಹೇಳಿದ ಹೊರಟ್ಟಿ, ಶಾಸಕರ ಭವನ ನಿರ್ಮಾಣಕ್ಕೆ 20 ಎಕರೆ ಮೀಸಲಿದೆ. ಅಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ನಿರ್ಧಾರ ಕೈಗೊಂಡರೆ, ಸರ್ಕಾರಕ್ಕೆ ಹಣ ಉಳಿತಾಯವಾಗುತ್ತದೆ ಎಂದು ಹೇಳಿದರು. ಅಧಿವೇಶನದ ಅವಧಿಯಲ್ಲಿ ವಸತಿಗಾಗಿಯೇ 4 ಕೋಟಿ ವೆಚ್ಚವಾಗುತ್ತದೆ ಎಂದರು
![Karnataka Files](https://secure.gravatar.com/avatar/3c8a792dfb280b36a94603273157ff83?s=96&r=g&d=https://karnatakafiles.com/wp-content/plugins/userswp/assets/images/no_profile.png)