ಧಾರವಾಡದ ಸಿ ಬಿ ಟಿ ಬಳಿ ಇರುವ ಶ್ರೀ ದುರ್ಗಾ ಪರಮೇಶ್ವರಿ ಮಂದಾರ್ತಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿದ್ದ ಸಂಪೂರ್ಣ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ಧಾಖಲಿಸಿಕೊಂಡಿದ್ದಾರೆ. ಇದು ಕೃತ್ಯನಾ, ಆಕಸ್ಮಿಕ ಘಟನೆಯಾ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.