ರಾಯಬರೇಲಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆಯಾಗಿರುವ ಕಾಂಗ್ರೆಸ್ಸಿನ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಈ ಸಲ ತೆಲಂಗಾಣದಿಂದ ಸ್ಪರ್ಧಿಸಲಿ ಎಂದು ಕಾಂಗ್ರೇಸ್ ರಾಜಕೀಯ ವ್ಯವಹಾರಗಳ ಸಮಿತಿ ನಿರ್ಧರಿಸಿದೆ. ಇಂದು ಸಭೆ ಸೇರಿದ ಕಾಂಗ್ರೇಸ್ಸಿನ ರಾಜಕೀಯ ವ್ಯವಹಾರಗಳ ಸಮಿತಿ ಇಂತಹ ಪ್ರಮುಖ ನಿರ್ಣಯ ಕೈಗೊಂಡಿದೆ. ಸಮಿತಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿಗೆ ಮನವಿ ಮಾಡಲಿದೆ.
