ಕಾಜಿಪೇಟ ನಿಲ್ದಾಣದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆದಿದೆ. ತೆಲಂಗಾಣ ರಾಜ್ಯದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್ ರೈಲು ನಿಲ್ದಾಣದಲ್ಲಿ ನಿಂತ ರೈಲಿನ ಹಳೆಯ ಪ್ಯಾಸೆಂಜರ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ಹತೋಟಿಗೆ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಇಲಾಖೆ ತನಿಖೆ ನಡೆಸಿದೆ.
ಕಾಜಿಪೇಟೆ ರೈಲು ನಿಲ್ದಾಣದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಎಚ್ಚರಿಕೆ ನೀಡಿದ ಬಳಿಕ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.