ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮಗ ಹಾಲಿ ಸಂಸದ ಬಿ ವೈ ರಾಘವೇಂದ್ರ ಪ್ರತಿನಿಧಿಸುತ್ತಿರುವ ಶಿವಮೊಗ್ಗ ಲೋಕಸಭಾ ಅಖಾಡಾ ಸಿದ್ದಗೊಂಡಿದೆ. ಕಾಂಗ್ರೇಸ್ ಘೋಷಿತ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಪ್ರಚಾರಕ್ಕೆ ಕಿಚ್ಚ ಸುದೀಪ ಧುಮುಕಲಿದ್ದಾರೆ ಅನ್ನೋ ಮಾಹಿತಿ ಹೊರ ಬಿದ್ದಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿರುವ ಗೀತಾ ಶಿವರಾಜಕುಮಾರ ಮತ್ತೆ ಅದೃಷ್ಟವನ್ನು ಪರೀಕ್ಷೆಗೊಡ್ಡಿದ್ದಾರೆ. ಬಿಜೆಪಿ ಇಂದ ಬಿ ವೈ ರಾಘವೇಂದ್ರ ಸ್ಪರ್ಧೆ ಮಾಡಲಿದ್ದು, ಈ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಈ ಕ್ಷೇತ್ರ ಬಿ ಎಸ್ ಯಡಿಯೂರಪ್ಪನವರಿಗೂ ಪ್ರತಿಷ್ಟೆಯ ಕ್ಷೇತ್ರವಾಗಿದೆ.
