ಪಕ್ಷದ ಚಟುವಟಿಕೆಯಿಂದ ದೂರವುಳಿದಿದ್ದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರ ಜೊತೆ ಕಾಣಿಸಿಕೊಂಡಿದ್ದಾರೆ.
ಅಣ್ಣಿಗೇರಿಯಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಿಸಲಾದ ಕ್ರೀಡಾ ಸಂಕೀರ್ಣದಲ್ಲಿ ಜೋಶಿ ಜೊತೆ ಶಂಕರ ಪಾಟೀಲ ಮುನೇನಕೊಪ್ಪ ಬ್ಯಾಡ್ಮಿಂಟನ್ ಆಡಿ ಗಮನ ಸೆಳೆದರು.