ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಇಂದು ಕಲಘಟಗಿಯ ಹಿರೇಹೊನ್ನಳ್ಳಿ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿದರು.
ಪ್ರತಿ ಚುನಾವಣೆಯಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತಗಳನ್ನು ನೀಡುವ ಗ್ರಾಮದಿಂದಲೇ ಇಂದು ಚುನಾವಣಾ ಬಹಿರಂಗ ಸಭೆ ಹಮ್ಮಿಕೊಂಡಿದ್ದು, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಅವಕಾಶ ಕೊಡಬೇಕು, ಈ ಸಲವು ಅತೀ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು