ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಶೆಟ್ಟರ, ಬೆಳಗಾವಿಯಲ್ಲಿಯೇ ಮನೆ ಮಾಡಿದ್ದಾರೆ.
17 ರಂದು ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ.