ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರಲ್ಲಾದ ಜೋಶಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಸತತವಾಗಿ ನಾಲ್ಕು ಬಾರಿ ಸಂಸದರಾಗಿರುವ ಜೋಶಿ, 5 ನೇ ಸಲ ಸ್ಪರ್ಧೆ ಮಾಡಿದ್ದಾರೆ. 11 ಘಂಟೆಗೆ ಧಾರವಾಡದ ಶಿವಾಜಿ ಸರ್ಕಲ್ ನಿಂದ ಮೆರವಣಿಗೆ ಆರಂಭವಾಗಲಿದೆ.
ಯಾರೆಲ್ಲ ಭಾಗಿ ಆಗ್ತಾರೆ!
on request ಬರೋರು ಯಾರು
ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಅಲ್ಲದೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬರುವಂತೆ ಜೋಶಿಯವರು, ಜಗದೀಶ ಶೆಟ್ಟರ ಶೆಟ್ಟರ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ಬೆಳಗಾವಿಗೆ ಹೋಗಿದ್ದ ಜೋಶಿಯವರು ನಾಮಪತ್ರ ಸಲ್ಲಿಕೆಗೆ ಬರುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರ ನಡುವೆ ವೈಮನಸ್ಸು ಮುಂದುವರೆದಿದ್ದರೂ, ಪಕ್ಷದ ಹಿತದೃಷ್ಟಿಯಿಂದ ಶೆಟ್ಟರ ಅವರು ಜೋಶಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.