ಧಾರವಾಡ ಲೋಕಸಭಾ ಕ್ಷೇತ್ರದ ಅಖಾಡಾ ರಂಗೇರುತ್ತಿದೆ. ಕ್ಷೇತ್ರದ ರಾಜಕೀಯ ಲೆಕ್ಕಾಚಾರವನ್ನೇ ಬುದಮೇಲು ಮಾಡಿದ್ದ ದಿಂಗಾಲೇಶ್ವರ ಶ್ರೀಗಳ ನಾಮಪತ್ರ ಸಲ್ಲಿಕೆ, ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ತಮ್ಮ ನಾಮಪತ್ರವನ್ನು ಹಿಂಪಡೆಯುವ ನಿರ್ಧಾರಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಬಂದಿದ್ದಾರೆ ಎಂದು ಕರ್ನಾಟಕ ಫೈಲ್ಸ್ ಗೆ ಶ್ರೀಗಳ ಅಪ್ತ ಮೂಲಗಳು ತಿಳಿಸಿವೆ. ನಾಮಪತ್ರ ಹಿಂಪಡೆದು ಕಾಂಗ್ರೇಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಲಿದ್ದಾರೆ.
ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿರುವ ಬಿಜೆಪಿಗೆ ದಿಂಗಾಲೇಶ್ವರ ಶ್ರೀಗಳು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ
ನಾಳೆ ನಾಮಪತ್ರ ವಾಪಸ ಪಡೆಯಲು ಕೊನೆಯ ದಿನವಾಗಿದ್ದು, ದಿಂಗಾಲೇಶ್ವರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ.