ರಾಷ್ಟ್ರವ್ಯಾಪಿ ಸುದ್ದಿ ಮಾಡಿರುವ ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿ ಓ ಡಿ ಗೆ ಹಸ್ತಾಂತರ ಮಾಡುವದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ ಅವರು, ಪ್ರಕರಣದ ತನಿಖೆ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ತಿಳಿಸಿದರು.
