ಧಾರವಾಡ ಜಿಲ್ಲೆಯ ಪ್ರಭಾವಿ ನಾಯಕ ಪಿ ಎಚ್ ನೀರಲಕೇರಿ ಕಾಂಗ್ರೇಸ್ಸಿಗೆ ರಾಜೀನಾಮೆ ಕೊಟ್ಟು, ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ, ನೀರಲಕೇರಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಕಳೆದ 35 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಸೇವೆ ಮಾಡಿದ್ದ ನೀರಲಕೇರಿ ವಕೀಲರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ಬಲ ಬಂದಂತಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಪಕ್ಷ ಅವರ ಸೇವೆ ಪಡೆಯಲಿದ್ದು, ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುವದಾಗಿ ಪಿ ಎಚ್ ನೀರಲಕೇರಿ ತಿಳಿಸಿದ್ದಾರೆ.