ಧಾರವಾಡ ಲೋಕಸಭಾ ಕ್ಷೇತ್ರದ ಜವಾಬ್ದಾರಿಯನ್ನು ಆರೋಗ್ಯ ಸಚಿವ ದಿನೇಶ ಗುಂಡೂರಾವ ಹೊತ್ತಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಧಾರವಾಡ ಕ್ಷೇತ್ರದ ಜವಾಬ್ದಾರಿಯನ್ನು ದಿನೇಶ ಗುಂಡೂರಾವ ಅವರಿಗೆ ವಹಿಸಿದ್ದಾರೆ. ಚುನಾವಣೆ ಮುಗಿಯುವವರೆಗೆ ಕ್ಷೇತ್ರದಲ್ಲಿಯೇ ಇರುವಂತೆ ಸೂಚನೆ ನೀಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಕಾಂಗ್ರೇಸ್, ಈ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇಬೇಕೆಂದು ತೀರ್ಮಾನಿಸಿದೆ. ನಾಳೆ ದಿನೇಶ ಗುಂಡೂರಾವ ಧಾರವಾಡಕ್ಕೆ ಬರಲಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತರಿಸಿದೆ.