ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ತಮ್ಮ ಕೆಲಸ ಶುರುಹಚ್ಚಿಕೊಂಡಿದ್ದಾರೆ. ಬೂತ್ ಮಟ್ಟದಲ್ಲಿ 15 ಜನರ ತಂಡವನ್ನು ನೇಮಕ ಮಾಡಲಾಗಿದ್ದು, ಮನೆ ಮನೆಗೆ ಗ್ಯಾರಂಟಿ ಪತ್ರಗಳನ್ನು ಹಂಚುತ್ತಿದ್ದಾರೆ.
ಕುಂದಗೋಳ ತಾಲೂಕಿನ ಹಳೆ ಹಂಚಿನಾಳ ಗ್ರಾಮ ಸೇರಿದಂತೆ ತಾಲೂಕಿನಲ್ಲಿ ಕಾಗ್ರೇಸ್ ಪಕ್ಷದ ಗ್ಯಾರಂಟಿ ಕಾರ್ಡಗಳನ್ನು ಹಂಚಲಾಗುತ್ತಿದೆ. ರಾಜ್ಯ ಕಾಂಗ್ರೇಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಈಗಾಗಲೇ ಯಶಸ್ಸು ಕಂಡಿದೆ.
ಅಖಿಲ ಭಾರತ ಕಾಂಗ್ರೇಸ್ ಸಮಿತಿ ಪಂಚ ಗ್ಯಾರಂಟಿ ಘೋಷಣೆ ಮಾಡಿದ್ದು, ಪ್ರತಿ ಮಹಿಳೆಗೆ, ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ನೀಡುವದಾಗಿ ಹೇಳಿದೆ. ಇದು ಕ್ಷೇತ್ರದ ಮಹಿಳೆಯರ ಉತ್ಸಾಹ ಇಮ್ಮಡಿಗೊಳಿಸಿದೆ.