ನಾಳೆ ನಡೆಯುವ ಮತದಾನಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಧಾರವಾಡದ ಕಾಂಗ್ರೇಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ. ಶಿವಳ್ಳಿ ಹಾಗೂ ಹೆಬ್ಬಳ್ಳಿ ಗ್ರಾಮದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಶಿವಳ್ಳಿಯ ಫಿರೋಜ ನಾಯಕ್, ಮತ್ತು ಹೆಬ್ಬಳ್ಳಿಯ ಈರಣ್ಣ ಶಿವಳ್ಳಿ ಎಂಬುವವರ ಮನೆ ಮೇಲೆ ದಾಳಿ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇವರಿಬ್ಬರ ಮನೆಯಲ್ಲಿ ಧಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಸುಮಾರು 20 ಜನ ಅಧಿಕಾರಿಗಳು ಇಬ್ಬರ ಮನೆ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಕಾಂಗ್ರೇಸ್ ನಾಯಕರನ್ನು ಹೆದರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾಂಗ್ರೇಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.