ಹಾಸನದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದೆ ದೇವರಾಜಗೌಡನನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಹೊರಟಿದ್ದ ದೇವರಾಜಗೌಡನನ್ನ ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕರೆದುಕೊಂಡು ಹೋಗಲು ಹೊಳೆನರಸಿಪುರ ಪೊಲೀಸರು ಬರುತ್ತಿದ್ದಾರೆ.
ಅಶ್ಲೀಲ ವಿಡಿಯೋ ವೈರಲ್ ಮಾಡಿದ್ದರ ಹಿನ್ನೆಲೆಯಲ್ಲಿ ಎಸ್ ಐ ಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ದೇವರಾಜಗೌಡ ನೋಟಿಸಗೆ ಉತ್ತರ ನೀಡದ ಹಿನ್ನೆಲೆಯಲ್ಲಿ ಆತನಿಗಾಗಿ ಹುಡುಕಾಟ ಆರಂಭಿಸಿದ್ದರು.
ಬಿಜೆಪಿ ಮುಖಂಡ ದೇವರಾಜಗೌಡ, ಹಾಸನದ ಪ್ರಜ್ವಲ್ ರೇವಣ್ಣರದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದರು