ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ್ ಕೇಜ್ರಿವಾಲ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ .
ಈ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾರ್ಚ 21 ರಂದು ಅರವಿಂದ ಕೇಜ್ರಿವಾಲರನ್ನು ಬಂಧಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ದ್ವಿಸದಸ್ಯ ಪೀಠವು ಈ ಆದೇಶವನ್ನು ಅಂಗೀಕರಿಸಿದೆ.
ಅರವಿಂದ ಕೇಜ್ರಿವಾಲರಿಗೆ ಜೂನ 1 ರ ವರೆಗೆ ಮಧ್ಯಂತರ ಜಾಮೀನು ನೀಡಿದ್ದು, ಯಾವದೇ ಅಧಿಕೃತ ಫೈಲಗಳಿಗೆ ಸಹಿ ಹಾಕದಂತೆ ಷರತ್ತು ವಿಧಿಸಿದೆ.