ಲೋಕಸಭೆ ಚುನಾವಣೆ ನಡೆಯುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನುಕ್ರಮವಾಗಿ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಮದನ್ ಲೋಕೂರ್ ಮತ್ತು ಎ ಪಿ ಶಾ ಅವರು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ.
ತಪ್ಪು ಮಾಹಿತಿ ಮತ್ತು ತಿರುಚಲಾದ ನಿರೂಪಣೆಯನ್ನು ಒದಗಿಸುವ ಇಂದಿನ ಡಿಜಿಟಲ್ ಜಗತ್ತಿನಲ್ಲಿ ಚರ್ಚೆಯ ಎಲ್ಲಾ ಅಂಶಗಳ ಬಗ್ಗೆ ಸಾರ್ವಜನಿಕರಿಗೆ ಉತ್ತಮ ಅರಿವು ಇರುವಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ನಿಟ್ಟಿನಲ್ಲಿ, ನ್ಯಾಯಮೂರ್ತಿ ಲೋಕುರ್ ಮತ್ತು ಶಾ, ಎನ್ ರಾಮ್ ಅವರೊಂದಿಗೆ ಪ್ರಮುಖ ಚುನಾವಣಾ ವಿಷಯಗಳ ಕುರಿತು ಈ ಚರ್ಚೆಯಲ್ಲಿ ಭಾಗವಹಿಸಲು ಮೋದಿ ಮತ್ತು ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಸ್ಥಳ, ಅವಧಿ, ನಿರೂಪಕರು ಹಾಗೂ ಚರ್ಚೆಯ ಸ್ವರೂಪವನ್ನು ಪರಸ್ಪರ ಒಪ್ಪುವಂತೆ ಸೂಚಿಸಿದ್ದಾರೆ. ಅವರು ಹಾಜರಾಗಲು ಸಾಧ್ಯವಾಗದಿದ್ದರೆ ತಮ್ಮ ಪ್ರತಿನಿಧಿಗಳನ್ನಾದರೂ ಕಳಿಸಿಕೊಡುವಂತೆ ಕೋರಲಾಗಿದೆ.