ಹಾಸನದ ಪ್ರಜ್ವಲ್ ರೇವಣ್ಣ ಮೇಲಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವದೇ ದೂರು ಧಾಖಲಾಗಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ಪ್ರಜ್ವಲ್ ರೇವಣ್ಣ ಕೇಸಿನಲ್ಲಿ ನಕಲಿ ದೂರು ನೀಡುವಂತೆ ಒತ್ತಾಯ ಮಾಡಿರುವ ಬಗ್ಗೆ ಸಂತ್ರಸ್ತೆ ನಮ್ಮ ಬಳಿ ಹೇಳಿದ್ದಾಳೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದ್ದು, ಇದೀಗ ಸಂಚಲನ ಮೂಡಿಸಿದೆ.
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಿ ಕೆ ಸಿಂಗ ನೇತೃತ್ವದ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು, ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ಅಲ್ಲದೆ ಪ್ರಜ್ವಲ್ ಮೇಲೆ ಸುಳ್ಳು ದೂರು ನೀಡುವಂತೆ ಪೊಲೀಸರಂತೆ ನಟಿಸಿರುವ ಮೂವರು ಒತ್ತಡ ಹೇರಿದ್ದಾರೆಂದು ಓರ್ವ ಮಹಿಳೆ ತಿಳಿಸಿದ್ದಾಳೆ ಎಂದು ಆಯೋಗ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದೆ.