ಕರ್ನಾಟಕದ ವಿವಿಧ ಪದವೀಧರ ಹಾಗೂ ಶಿಕ್ಷಣ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ ಪಾಟೀಲ, ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ, ಎ ದೇವೇಗೌಡ,
ಕರ್ನಾಟಕ ಆಗ್ನೇಯ ಶಿಕ್ಷಕ ಕ್ಷೇತ್ರಕ್ಕೆ ವೈ ಎ ನಾರಾಯಣಸ್ವಾಮಿ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕ ಕ್ಷೇತ್ರಕ್ಕೆ ಇ. ಸಿ ನಿಂಗರಾಜು ಅವರ ಹೆಸರನ್ನು ಬಿಜೆಪಿ ಪ್ರಕಟ ಮಾಡಿದೆ