ಮುಂಬೈನ ಘಾಟಕೋಪರನಲ್ಲಿ ತಡರಾತ್ರಿ ಭೀಕರ ಘಟನೆ ನಡೆದಿದೆ. ಬಿರುಗಾಳಿ ಸಹಿತ ಅಕಾಲಿಕ ಮಳೆಗೆ ಬೃಹತ್ ಜಾಹೀರಾತು ಫಲಕ ಉರುಳಿದ ಪರಿಣಾಮ ಇಲ್ಲಿಯವರೆಗೆ 15 ಜನ ಮೃತಪಟ್ಟಿದ್ದು, 80 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಪಾಲಿಕೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದೇ ವೇಳೆ ಸರ್ಕಾರ ಘಟನೆ ಕುರಿತಂತೆ ತನಿಖೆಗೆ ಆದೇಶಿಸಿದೆ