ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಕಾಣಿಸಿಕೊಂಡಿದೆ. ಖಾಲಿ ಆಗಿರುವ ಕೆರೆಗಳಿಗೆ ನೀರು ತುಂಬಿಸಿಕೊಳ್ಳಲು ಮಲಪ್ರಭಾ ಕಾಲುವೆ ಇಂದ ನೀರು ಬಿಡಲಾಗಿದೆ.
ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡಲಾಗಿದ್ದು, ರೈತರು ಜಮೀನುಗಳಿಗೆ ನೀರು ಬಳಸಿಕೊಳ್ಳಬಾರದು ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 66 ಹಳ್ಳಿಗಳಲ್ಲಿ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದೆ.