ಗದಗ ಜಿಲ್ಲಾ ಕೇಂದ್ರದಲ್ಲಿ ಜನಸಾಮಾನ್ಯರು ಸಣ್ಣ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಲ್ಲಿ ತೊಂದರೆ ಅನುಭವಿಸುತ್ತಿದ್ದಾರೆಂಬ ದೂರಿನ ಮೇಲೆ, ಗದಗ ನಗರಸಭೆಯಲ್ಲಿ ಗದಗ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಸಭೆ ನಡೆಸಿದ್ರು.
ಗದಗ ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಸಾರ್ವಜನಿಕರಿಂದ ಕುಂದುಕೊರತೆ ಹಾಗೂ ಅಹವಾಲು ಆಲಿಸಿದರು. ಸಣ್ಣ ಪುಟ್ಟ ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತೊಂದರೆ ನೀಡದೆ ಕೆಲಸ ಮಾಡುವಂತೆ ಸೂಚಿಸಿದ್ರು. ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿರುವ ಲೋಕಾಯುಕ್ತ ಡಿ ವೈ ಎಸ್ ಪಿ ವಿಜಯ ಬಿರಾದಾರ, ಜಿಲ್ಲೆಯಾಧ್ಯಂತ ಕ್ಷೀಪ್ರ ಕಾರ್ಯಾಚರಣೆ ಮಾಡುವ ಮೂಲಕ ಜನರಲ್ಲಿ ಲೋಕಾಯುಕ್ತ ಬಗ್ಗೆ ವಿಶ್ವಾಸ ಮೂಡಿಸುತ್ತಿದ್ದಾರೆ.