ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಕ್ತಾಯಗೊಂಡಿದ್ದು, ದೇಶದ ಜನ ಪ್ರಧಾನಿ ಮೋದಿಯವರನ್ನು ಬಿಳ್ಕೋಡಲು ಸಜ್ಜಾಗಿದ್ದಾರೆ ಎಂದು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೇಶದ ಸಂವಿಧಾನ ಬದಲಾವಣೆ ಮಾಡುವದಾಗಿ ಹೇಳಿದವರ ಮೇಲೆ ಪ್ರಧಾನಿ ನರೇಂದ್ರ ಮೋದಿ ಯಾವದೇ ಕ್ರಮ ಕೈಗೊಂಡಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ, ಇದಕ್ಕೆ ತಕ್ಕ ಉತ್ತರ ಸಿಗಲಿದೆ ಎಂದರು.
ಉತ್ತರ ಪ್ರದೇಶದಲ್ಲಿ ಬಿಜೆಪಿಯ ಬಹುತೇಕ ನಾಯಕರು, ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ. ಇಂಡಿಯಾ ಒಕ್ಕೂಟ ಸರ್ಕಾರ ರಚನೆಯಾಗಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.