ಐಪಿಎಸ್ ಡಿ ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿರುವ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಐಪಿಎಸ್ ಅಧಿಕಾರಿ ಡಿ ರೂಪ ವಿರುದ್ಧ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ರೋಹಿಣಿ ಸಿಂಧೂರಿಯವರು ದೂರು ದಾಖಲಿಸಿದ್ದರು.
ರೂಪಾ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಕೊಡಿಸಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಆ ಮೊಕದ್ದಮೆ ಇದೀಗ ಸುಪ್ರೀಂ ಕೋರ್ಟ ಮೆಟ್ಟಲೇರಿದ್ದು, ಸುಪ್ರೀಂ ಕೋರ್ಟನಲ್ಲಿ ಇಂದು ಐ ಎ ಎಸ್ ಅಧಿಕಾರಿ ರೋಹಿಣಿ ಸಿಂದೂರಿ ಹೂಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆದಿದೆ.