ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೇಸ್ಸಿನಿಂದ ಅಜಯ್ ರಾಯ್ ತೊಡೆ ತಟ್ಟಿದ್ದಾರೆ.
ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ, ಅಜಯ್ ರಾಯ್ ಅವರು 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು, ಆದರೆ ಅವರು ಎರಡೂ ಬಾರಿಯೂ ಮೂರನೇ ಸ್ಥಾನ ಗಳಿಸಿದ್ದರು. 2019 ರ ಚುನಾವಣೆಯಲ್ಲಿ ಪ್ರಧಾನಿ ಮೋದಿ, ಅವರು ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಅವರನ್ನು 4.79 ಲಕ್ಷ ಮತಗಳಿಂದ ಸೋಲಿಸಿದ್ದರು.
ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಕಾಂಗ್ರೇಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಇಬ್ಬರ ನಡುವೆ ನೇರಾ ನೇರ ಪೈಪೋಟಿ ನಡೆಯಲಿದೆ.