ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸುವದನ್ನು ಮುಂದುವರೆಸಿದ್ದಾರೆ. ರಾಜ್ಯ ಕಾಂಗ್ರೇಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ.
ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರು, ಯಾವದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಯತ್ನಾಳ, ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಪೋಸ್ಟ ಹಾಕುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಗೃಹ ಸಚಿವರಾಗುವವರಿಗೆ ಇರಬೇಕಾದ ಅರ್ಹತೆಗಳ ಬಗ್ಗೆಯೂ ಹೇಳಿರುವ ಯತ್ನಾಳ, ಒಂದು ವೇಳೆ ಅಂತಹವರಿದ್ದಲ್ಲಿ ಶಾಸಕರು ಮುಚ್ಚಿದ ಲಕೋಟೆಯಲ್ಲಿ ಮುಖ್ಯಮಂತ್ರಿಗಳಿಗೆ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.