ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ NIA ವಶಕ್ಕೆ ಪಡೆದಿದೆ ಎನ್ನಲಾಗಿದೆ.
ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಕೆಫೆ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ಮತಿನ್ ತಾಹಾ, ಹಾಗೂ ಮುಸಾವೀರ ಹುಸೇನ್ ಎಂಬುವವರಿಗೆ ಆರ್ಥಿಕ ಸಹಾಯ ಮಾಡಿದ್ದರು ಎನ್ನಲಾಗಿದೆ.
ಹುಬ್ಬಳ್ಳಿಯ ಶೋಯಬ್ ಮಿರ್ಜಾ ಅಲಿಯಾಸ ಚೋಟು ಹಾಗೂ ಈತನ ಸಹೋದರ ಆಜೀಜ್ ಅಹ್ಮದ ಮಿರ್ಜಾ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ದಾಳಿ ಸಂದರ್ಭದಲ್ಲಿ ಕೆಲ ಡಿಜಿಟಲ್ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದ್ದು, ಇಬ್ಬರನ್ನು ಬೆಂಗಳೂರಿನಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಜ್ಯ ಪತ್ರಿಕೆಗಳು ವರದಿ ಮಾಡಿವೆ.
