Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಆಗಮನಕ್ಕೆ ಕ್ಷಣಗಣನೆ. ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಪ್ರಜ್ವಲ್ ರೇವಣ್ಣ ಆಗಮನಕ್ಕೆ ಕ್ಷಣಗಣನೆ. ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಹಾಸನದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ರಾತ್ರಿ 12-30 ರ ಸುಮಾರಿಗೆ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ. 

ಮಹಿಳೆಯರ ಅಶ್ಲೀಲ ವಿಡಿಯೋ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದು, ಇಂದು ಹಾಸನದಲ್ಲಿ ದೊಡ್ಡ ಪ್ರತಿಭಟನೆ ನಡೆದಿದೆ.

ಜರ್ಮನಿಯಿಂದ ಹೊರಟಿರುವ ಪ್ರಜ್ವಲ್ ರೇವಣ್ಣ, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಇಮಿಗ್ರೇಶನ್ ( ವಲಸೆ ಮತ್ತು ಕಸ್ಟಮ್ಸ್ ) ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ನಂತರ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. 

ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ಪಡೆಯಲು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಾಧ್ಯಮಗಳು ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿವೆ. ವಿಮಾನ ನಿಲ್ದಾಣಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!