ಕರ್ನಾಟಕದಲ್ಲಿ ಕನಿಷ್ಟ 15 ಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದ ವರಿಷ್ಟರು ಚುನಾವಣೋತ್ತರ ಸಮೀಕ್ಷೆ ಒಪ್ಪಲು ಸಾಧ್ಯವಿಲ್ಲ ಎಂದು ಈಗಾಗಲೇ ಹೇಳಿದ್ದು, ಸಮೀಕ್ಷಾ ವರದಿಗೆ ವ್ಯತಿರಿಕ್ತವಾಗಿ ಫಲಿತಾಂಶ ಬರಲಿದೆ ಎಂದು ತಿಳಿಸಿದ್ದಾರೆ. ಡಿ ಕೆ ಶಿವಕುಮಾರ ಈಗಾಗಲೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದು, ಬಿಜೆಪಿ ಭದ್ರನೆಲೆ ದಕ್ಷಿಣ ಕನ್ನಡ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ.