ಸತತವಾಗಿ ಬೀಳುತ್ತಿರುವ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು, ಡೆಂಗ್ಯೂ ಕಾಣಿಸಿಕೊಂಡಿದೆ.
ಹುಬ್ಬಳ್ಳಿ ಹಾಗು ಧಾರವಾಡ ತಾಲೂಕಿನಲ್ಲಿ ಡೆಂಗ್ಯೂ ಕಂಡು ಬಂದಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಇವರೆಗೆ 142 ಡೆಂಗ್ಯೂ ಪ್ರಕರಣಗಳು ಧಾಖಲಾಗಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಕರ್ನಾಟಕ ಫೈಲ್ಸ್ ಗೆ ತಿಳಿಸಿದ್ದಾರೆ. ಇನ್ನುಳಿದಂತೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿಯೂ ಡೆಂಗ್ಯೂ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜನರು ಅಕ್ಕಪಕ್ಕದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದ್ದು, ಡೆಂಗ್ಯೂ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.