ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಸೇರಿದಂತೆ ಕೆಲ ಕಡೆ ಭಾರಿ ಮಳೆ ಸುರಿಯುತ್ತಿದೆ.
ಮುಂಗಾರು ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ಧಾರವಾಡ ಹಾಗೂ ಹಾವೇರಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಹಾವೇರಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಕೆಲವು ಕಡೆ ವಾರಾಂತ್ಯದಲ್ಲಿ 300 ರಿಂದ 400 ಮಿ.ಮೀ. ಮಳೆಯಾಗುವ ಲಕ್ಷಣ ಇದೆ ಎಂದು ಹೇಳಿದೆ.