ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಗುಂಡಿನ ದಾಳಿ ನಡೆದಿದೆ.
ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬುವನ ಮೇಲೆ ಗುಂಡಿನ ದಾಳಿ ನಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಶೋಕ ಮನೆಯ ಬಳಿ ಬಂದಾಗ, ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ.
ರೌಡಿ ಶೀಟರ್ ಆಗಿದ್ದ ಅಶೋಕ ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡುಗಳು ತಾಗಿವೆ.
ಮೃತ ಅಶೋಕ ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದ. ಕೊಲೆ ಹಾಗೂ ಇತರೆ ಕೇಸ್ ಗಳಲ್ಲಿ ಅಪರಾಧಿಯಾಗಿದ್ದ ಅಶೋಕನಿಗೆ ವಿರೋಧಿ ಗುಂಪು ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದೆ. ಅಶೋಕ ಮೇಲಿನ ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದ್ದು, ಚಡಚಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2 ರ ಬಿಜೆಪಿ ಸದಸ್ಯೆಯಾಗಿದ್ದಾಳೆ.
