Download Our App

Follow us

Home » ರಾಜಕೀಯ » ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಿನ್ನೆಲೆ,ರಾಜ್ಯಪಾಲರಿಗೆ ಭೇಟಿಯಾದ ಪಿ ಎಚ್ ನೀರಲಕೇರಿ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಿನ್ನೆಲೆ,ರಾಜ್ಯಪಾಲರಿಗೆ ಭೇಟಿಯಾದ ಪಿ ಎಚ್ ನೀರಲಕೇರಿ

ರಾಜ್ಯ ಕಾಂಗ್ರೇಸ್ ಸರ್ಕಾರ ಏಕಾಏಕಿ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ಮಾಡಿರುವುದನ್ನು ತಡೆಹಿಡಿಯುವಂತೆ ಕರ್ನಾಟಕ ಥಿಂಕರ್ಸ್ ಫೋರಂ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಪಿ.ಎಚ್. ನೀರಲಕೇರಿ ಅವರು ಭಾನುವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಪೆಟ್ರೋಲ್ ಮೂರು ರೂಪಾಯಿ ಡಿಸೇಲ್ ಮೂರೂವರೆ ರೂಪಾಯಿ ಗಮನಾರ್ಹ ಏರಿಕೆ ಮಾಡಿರುವುದು ತೀವ್ರ ಖಂಡನೀಯ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸಲಾಗುತ್ತಿದೆ, ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಡಲಾಗುತ್ತಿದೆ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದಿರುವ ಅವರು ಸರ್ಕಾರ ಅವೈಜ್ಞಾನಿಕವಾಗಿ ಏರಿಸಿರುವ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ತಡೆಹಿಡಿಯಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!