ಗ್ರಾಮ ವಾಸ್ತವ್ಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಹಾಗೂ ಸಧ್ಯ ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿಯವರು ಇದೇ ದಿನಾಂಕ 18 ರಂದು ಧಾರವಾಡದ ಕೃಷಿ ವಿಶ್ವ ವಿಧ್ಯಾಲಯಕ್ಕೆ ಆಗಮಿಸಲಿದ್ದಾರೆ.
ಭಾರತ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಕಿಸಾನ್‌ನ 17 ನೇ ಕಂತು ಬಿಡುಗಡೆ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಜೂನ್ 18 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಕಿಸಾನ್ ಸಮ್ಮೇಳನ’ವನ್ನು ಆಯೋಜಿಸಲಾಗಿದ್ದು, ಪ್ರಧಾನ ಮಂತ್ರಿಗಳು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಧಾರವಾಡದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಎಚ್ ಡಿ ಕುಮಾರಸ್ವಾಮಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆನ್ ಲೈನ್ ಮೂಲಕ ಸಮಾರಂಭದಲ್ಲಿ ಭಾಗವಹಿಸುವಂತೆ ಕೃಷಿ ಸಚಿವ ಶಿವರಾಜಸಿಂಗ ಚವ್ಹಾಣ ಕುಮಾರಸ್ವಾಮಿಯವರಿಗೆ ಪತ್ರ ಬರೆದು ಆಹ್ವಾನ ನೀಡಿದ್ದಾರೆ.
