ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ.ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು.
ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಕಣ್ಣಿಗೆ ಕುಕ್ಕುವ ಹೆಡ್ ಲೈಟ್ ಕಾರಣಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.
