ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾದ ವಿನಯ ಕುಲಕರ್ಣಿ ಅವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದ ಡಿ ಕೆ ಶಿವಕುಮಾರ ಅವರ ನಿರ್ದೇಶನದ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಸಚಿವ ಮಧು ಬಂಗಾರಪ್ಪನವರು ನೂತನವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರನ್ನಾಗಿ ಬಸವರಾಜ ಮಲಕಾರಿ ಅವರನ್ನು ತಕ್ಷಣಕ್ಕೆ ಜಾರಿಯಾಗುವಂತೆ ನೇಮಕಮಾಡಿ ಆದೇಶಿಸಿದ್ದಾರೆ.
ಬಸವರಾಜ ಮಲಕಾರಿ ಈ ಹಿಂದೆ ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದು, ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
