ಪವಿತ್ರ ಅಮರನಾಥ ಗುಹಾ ದೇಗುಲಕ್ಕೆ ೫೨ ದಿನಗಳ ಸುದೀರ್ಘ ವಾರ್ಷಿಕ ತೀರ್ಥಯಾತ್ರೆಯು ಇಂದು ಬೆಳಗ್ಗೆ ಕಾಶ್ಮೀರ ಕಣಿವೆಯ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಬಿಗಿ ಭದ್ರತೆಯ ನಡುವೆ ಆರಂಭವಾಯಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಪವಿತ್ರ ಅಮರನಾಥ ಯಾತ್ರೆಗೆ ಇಂದು ವಿಧ್ಯುಕ್ತ ಚಾಲನೆ ನೀಡಲಾಯಿತು. ೫೨ ದಿನಗಳ ಕಾಲ ನಡೆಯಲಿರುವ ಈ ಯಾತ್ರೆ ಇಂದು ಬೆಳಗ್ಗೆ ಕಾಶ್ಮೀರ ಕಣಿವೆಯ ಪಹಲ್ಗಾಮ್ ಮತ್ತು ಬಲ್ತಾಲ್ ಮಾರ್ಗಗಳಿಂದ ಬಿಗಿ ಭದ್ರತೆಯ ನಡುವೆ ಆರಂಭವಾಯಿತು.
ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ೫ ಸಾವಿರದ ೩೦೦ ಕೋಟಿ ರೂಪಾಯಿ ಅನುದಾನ ನೀಡಲು ಸಮ್ಮತಿಸಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ಕುರಿತು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಲ್ಲಿಂದು ಹೇಳಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ-ಎನ್‌ಟಿಎ ಯಲ್ಲಿ ಸುಧಾರಣೆಗಳನ್ನು ಶಿಫಾರಸು ಮಾಡಲು ಶಿಕ್ಷಣ ಸಚಿವಾಲಯ ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿಯು ಸುಧಾರಣೆ ಮತ್ತು ಪುನರ್‌ರಚನೆಯ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸಲಹೆಗಳನ್ನು ಕೋರಿದೆ.
ಲೇಹ್ ಪಟ್ಟಣದ ದೌಲತ್ ಬೇಗ್ ಓಡ್ ಪ್ರದೇಶದ ವಾಸ್ತವ ನಿಯಂತ್ರಣಾ ರೇಖೆಯ ಸಮೀಪ ನಿನ್ನೆ ಯೋಧರು ಯುದ್ಧ ಟ್ಯಾಂಕ್ ಸಮರಾಭ್ಯಾಸದಲ್ಲಿ ನಿರತರಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಲಡಾಖ್‌ನಲ್ಲಿ ಯುದ್ಧ ಟ್ಯಾಂಕ್‌ನ ಸಮರಾಭ್ಯಾಸದ ಸಮಯದಲ್ಲಿ ಹಠಾತ್ ಪ್ರವಾಹ ಉಂಟಾಗಿ ಭಾರತೀಯ ಸೇನೆಯ ಐವರು ಯೋಧರು ಮೃತಪಟ್ಟಿದ್ದಾರೆ.
ನಾಳೆ ಬೆಳಗ್ಗೆ ೧೧ ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಮನದ ಮಾತನ್ನು ಹಂಚಿಕೊಳ್ಳಲಿದ್ದಾರೆ. ಮಾಹಿತಿ ಏಐಆರ್