“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಜುಲೈ 6 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.
ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಮಾತ್ರ ಬರುವಂತೆ ಸೂಚನೆ ನೀಡಲಾಗಿದೆ. ಈ ಸಭೆಗೆ ಶಾಸಕರಿಗೆ ಅವಕಾಶ ಇರುವದಿಲ್ಲ ಎಂದು ಕೆಪಿಸಿಸಿ ಕಚೇರಿ ತಿಳಿಸಿದೆ.
ಕಾಂಗ್ರೇಸ್ ಸರ್ಕಾರ ಬಂದ ನಂತರ ಮೊದಲ ಬಾರಿ ಕಾಂಗ್ರೇಸ್ ಕಾರ್ಯಕರ್ತರನ್ನು ಭೇಟಿ ಮಾಡುವ ಕಾರ್ಯಕ್ರಮ ಇದಾಗಿದೆ.